ನವದೆಹಲಿ : ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 909 ಹೊಸ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು 34 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 8356 ಕ್ಕೆ ಏರಿಕೆಯಾಗಿದ್ದು 273 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ಈವರೆಗೆ 716 ಜನರು ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ವಾಪಸ್ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದೆ. ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್, “ಈವರೆಗೆ 8356 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮಾರ್ಚ್ 29 ರಂದು 979 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಇದೀಗ 8356 ಜನರಲ್ಲಿ ಸೋಂಕು ಕಂಡುಬಂದಿದ್ದರೂ ಆಮ್ಲಜನಕದ ಅಗತ್ಯವಿರುವವರ ಸಂಖ್ಯೆ ಕೇವಲ ಶೇ 20 ರಷ್ಟು ಎಂದರು.
ಕೋವಿಡ್ ಆಸ್ಪತ್ರೆ ನಿರ್ಮಾಣದಲ್ಲಿ ಖಾಸಗಿ ವಲಯವನ್ನೂ ತೊಡಗಿಸಿಕೊಂಡಿದ್ದು ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ನೀಡಲಾಗುತ್ತಿದೆ. ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧವಾಗಿದ್ದು ಭೀತರಾಗುವ ಅಗತ್ಯವಿಲ್ಲ ಎಂದು ಲವ್ ಅಗರ್ವಾಲ್ ಹೇಳಿದ್ದಾರೆ.
Follow us on Social media