ಬೆಂಗಳೂರು: ಕೊರೋನಾ ಆತಂಕದ ನಡುವಲ್ಲೂ ರಾಜ್ಯಾದ್ಯಂತ ಎಸ್ಎಸ್ಎಲ್’ಸಿ ಪರೀಕ್ಷೆ ಗುರುವಾರದಿಂದ ಆರಂಭವಾಗುತ್ತಿದ್ದು, ಲಾಕ್’ಡೌನ್ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಸರ್ಕಾರ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿದೆ.
ರಾಜ್ಯದಾದ್ಯಂತ 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಸರ್ವ ರೀತಿಯಲ್ಲಿಯೂ ಸರ್ಕಾರ ಕ್ರಮ ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳು ಕೇವಲ ಪರೀಕ್ಷಾ ಕೇಂದ್ರಗಳಲ್ಲ. ಸುರಕ್ಷಿತ ಕೇಂದ್ರಗಳಾಗಿವೆ. ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಬೇಡಿ, ಪೋಷಕರು ಕೂಡ ಧೈರ್ಯಗೆಡದೆ ಪರೀಕ್ಷೆಗಳಿಗೆ ಮಕ್ಕಳನ್ನು ಕಳುಹಿಸಿಕೊಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.
ತಮಿಳುನಾಡು, ತೆಲಂಗಾಣ ಮತ್ತು ಪುದುಚೇರಿಯಲ್ಲಿ ಪರೀಕ್ಷೆ ರದ್ದುಗೊಳಿಸಿರುವುದರಿಂದ ರಾಜ್ಯದಲ್ಲಿಯೂ ಎಸ್ಎಸ್ಎಲ್’ಸಿ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹವಿದೆ. ಆದರೆ, ನೆರೆ ರಾಜ್ಯಗಳಲ್ಲಿ ಉದ್ಯೋಗ ಸೇರಿದಂತೆ ಿನ್ನಿತರೆ ದಾಖಲೆಗಳಿಗಾಗಿ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಪರಿಗಣಿಸುತ್ತಾರೆ. ರಾಜ್ಯದಲ್ಲಿ 10ನೇ ತರಗತಿ ಪರೀಕ್ಷೆ ಬಹಳ ಮುಖ್ಯವಾಗಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪರೀಕ್ಶಷೆ ನಡೆಸಲಾಗುತ್ತಿದ್ದು, ಪ್ರತಿಷ್ಠೆಗಾಗಿ ನಡೆಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Follow us on Social media