ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ ಇದೀಗ 3 ಲಕ್ಷ ಗಡಿ ದಾಟಿದೆ.
ಹೌದು..ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 3,04,019ಕ್ಕೆ ಏರಿಕೆಯಾಗಿದ್ದು, ಇಂದು ಒಂದೇ ದಿನ ಭಾರತದಲ್ಲಿ ದಾಖಲೆಯ 396 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 8,498ಕ್ಕೆ ಏರಿಕೆಯಾಗಿದೆ.
ಈಗಾಗಲೇ ಭಾರತ ಗರಿಷ್ಠ ಸೋಂಕಿತರ ಸಂಖ್ಯೆಯಲ್ಲಿ ಇಟಲಿಯನ್ನು ಹಿಂದಿಕ್ಕಿ ವಿಶ್ವದ 4ನೇ ಸ್ಥಾನಕ್ಕೇರಿದೆ. ಇದೀಗ ಮತ್ತೆ ಭಾರತದಲ್ಲಿ ಸಾವಿರಾರು ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿರುವುದು ಅತಂಕದ ವಿಚಾರವಾಗಿದೆ.
ಪ್ರಮುಖವಾಗಿ ಮಹಾರಾಷ್ಟ್ರ, ದೆಹಲಿ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ದೇಶದ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣ ಎನ್ನಲಾಗುತ್ತಿದೆ. ದೇಶದಲ್ಲಿ ಈವರೆಗೂ 1,47,195 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿನ ಸೋಂಕಿತರ ಗುಣಮುಖ ಪ್ರಮಾಣ ಶೇ.49.47ಕ್ಕೆ ಏರಿಕೆಯಾಗಿದೆ.