ನವದೆಹಲಿ: ಕೊರೋನಾ ಹೊಡೆತದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಜನತೆಗೆ ಸತತವಾಗಿ ಏರಿಕೆ ಕಾಣುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ದರ ಕೂಡ ಭಾರೀ ಹೊಡೆತವನ್ನು ನೀಡುತ್ತಿದೆ.
ಸತತ 8ನೇ ದಿನ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಕಂಡಿದ್ದು, ಆ ಬೆಳವಣಿಗೆ ಗ್ರಾಹಕರಿಗೆ ಆಘಾತವನ್ನು ತಂದಿದೆ
ಪೆಟ್ರೋಲ್ ದರದಲ್ಲಿ 62 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 64 ಪೈಸೆ ಏರಿಕೆಯಾಗಿದ್ದು, ಇದರಂತೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ರೂ.75.78 ಹಾಗೂ ಪ್ರತೀ ಲೀಟರ್ ಡೀಸೆಲ್ ದರ ರೂ.74.03ಕ್ಕೆ ಜಿಗಿದಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕಂಪನಿಗಳು ಈ ಹೆಚ್ಚಳ ಮಾಡುತ್ತಿವೆ. ಇದು ಮತ್ತೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Follow us on Social media