ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 8,642 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಕಳೆದ 24 ಗಂಟೆಯಲ್ಲಿ ದಾಖಲೆಯ 126 ಮಂದಿ ಬಲಿಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 8,642 ಹೊಸ ಪ್ರಕರಣ ಪತ್ತೆಯಾಗಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,49,590ಕ್ಕೆ ಏರಿಕೆಯಾಗಿದೆ.
ಕೋವಿಡ್-19 ಸೋಂಕಿನಿಂದ ಇಂದು ದಾಖಲೆಯ 126 ಮಂದಿ ಬಲಿಯಾಗಿದ್ದು ರಾಜ್ಯದಲ್ಲಿ ಮೃತರ ಸಂಖ್ಯೆ 4,327ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 7,201 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ 2,49,590 ಪ್ರಕರಣಗಳ ಪೈಕಿ 1,64,150 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 81,097 ಸಕ್ರಿಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿಂದು 2,804 ಪ್ರಕರಣ ಪತ್ತೆಯಾಗಿದ್ದು 56 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ನಗರದಲ್ಲಿ ಸಾವಿನ ಸಂಖ್ಯೆ 1,588ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ 96,910 ಮಂದಿ ಸೋಂಕಿಗೆ ತುತ್ತಾಗಿದ್ದು 62,041 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 33,280 ಸಕ್ರೀಯ ಪ್ರಕರಣಗಳಿವೆ.
Follow us on Social media