ಮುಂಬೈ: ಕೊರೋನಾಗೆ ರಣಕೇಕೆಗೆ ಮಹಾರಾಷ್ಟ್ರ ಕಂಗಾಲಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 41,000 ಗಡಿ ದಾಟಿದೆ. ಅಲ್ಲದೆ, ಮುಂಬೈ ನಗರವೊಂದರಲ್ಲಿಯೇ ಬರೋಬ್ಬರಿ 25,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.
ಹೆಮ್ಮಾರಿ ವೈರಸ್ ಆರ್ಭಟಕ್ಕೆ ಕಳೆದ 24 ಗಂಟೆಗಳಲ್ಲಿ 1,382 ಮಂದಿಯಲ್ಲಿ ಸೋಂಕು ಸೋಂಕು ಪತ್ತೆಯಾಗಿದ್ದು, 41ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.
ಈ ನಡುವೆ 285 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈ ವರೆಗೂ ಗುಣಮುಖರಾದವರ ಸಂಖ್ಯೆ 6,751ಕ್ಕೆ ಏರಿಕೆಯಾಗಿದೆ. ಇದರಲ್ಲಿ 5,524 ಮಂದಿ ಸರ್ಕಾರಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, 1,227 ಮಂದಿ ಖಾಸಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ಬಿಎಂಸಿ ಮಾಹಿತಿ ನೀಡಿದೆ.
Follow us on Social media