ಮುಂಬೈ: ಕ್ವಾರಂಟೈನ್ ಕೇಂದ್ರದಲ್ಲೂ ಕಾಮುಕರು ಕ್ರೌರ್ಯಮುಂದುವರೆಸಿದ್ದು, ಕೊರೋನಾ ಸೋಂಕಿತೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ನವೀ ಮುಂಬೈನ ಪನ್ವೆಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘೋರ ಘಟನೆ ನಡೆದಿದ್ದು, ಕ್ವಾರಂಟೈನ್ ಕೇಂದ್ರದಲ್ಲಿದ್ದ ಕೊರೋನಾ ಸೋಂಕಿತೆಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಈ ಬಗ್ಗೆ ಸಂತ್ರಸ್ಥೆ ಪೊಲೀಸ್ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪನ್ವೆಲ್ ಪೊಲೀಸ್ ಠಾಣಾ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.
ಈ ಬಗ್ಗೆ ಪೊಲೀಸ್ ಅಧಿಕಾರಿ ಅಶೋಕ್ ರಜಪೂತ್ ಅವರು, 40 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ದೃಢವಾಗಿದ್ದ ಹಿನ್ನಲೆಯಲ್ಲಿ ಪನ್ವೆಲ್ ನಲ್ಲಿರುವ ಇಂಡಿಯಾ ಬುಲ್ಸ್ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಈ ವೇಳೆ ಅದೇ ಕೇಂದ್ರದಲ್ಲಿ ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದಿದ್ದಾತನನ್ನೂ ಇರಿಸಲಾಗಿತ್ತು. ಇಂದು ಮುಂಜಾನೆ ಆತ ಮಹಿಳೆ ಮೇಲೆ ಅತ್ಯಾಚಾರ ವೆಸಗಿದ್ದಾನೆ. ಪ್ರಸ್ತುತ ಆರೋಪಿಯನ್ನು ಬಂಧಿಸಿಲ್ಲ. ಕಾರಣ ಆತನ ಕೊರೋನಾ ಟೆಸ್ಟ್ ವರದಿ ಬಂದಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆತನನ್ನು ಪ್ರತ್ಯೇಕವಾಗಿರಿಸಿ ವರದಿಗಾಗಿ ಕಾಯುತ್ತಿದ್ದೇವೆ. ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
Follow us on Social media