ಹಿರಿಯೂರು: ಚಲಿಸುತ್ತಿದ್ದ ಬಸ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲ್ಲೂಕಿನ ಕೆ.ಆರ್.ಹಳ್ಳಿ ಬಳಿ ಬುಧವಾರ ನಸುಕಿನಲ್ಲಿ ನಡೆದಿದೆ. ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕೆಎ 51- ಎಡಿ 7449 ಕುಕ್ಕೆ ಶ್ರೀ ಟ್ರಾವಲ್ಸ್ ಎಂಬ ಖಾಸಗಿ ಬಸ್ ಬಿಜಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವಾಗ ಈ ಘಟನೆ ನಡೆದಿದೆ. ಬಸ್ಸಿನಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು.
ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವಾಗ ಈ ಘಟನೆ ನಡೆದಿದೆ. ಬಸ್ಸಿನಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು.ಬಸ್ಗೆ ಬೆಂಕಿ ಅವರಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಹೊರಗೆ ಬರಲು ಪ್ರಯತ್ನಿಸಿದ್ದಾರೆ. ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಮಾಹಿತಿ ಸಿಕ್ಕಿದಂತೆ, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ವಿಜಯಪುರದಿಂದ ಹೊರಟ ಬಸ್ ಎಲ್ಲೂ ನಿಲ್ಲಿಸದೆ ಸಂಚಾರ ನಡೆಸಿದೆಯಂತೆ. ಪ್ರಯಾಣಿಕರು ಹೇಳಿದ್ದರು ಚಾಲಕ ಯಾರ ಮಾತು ಕೇಳದೆ ಡ್ರೈವ್ ಮಾಡಿದ್ದಾನೆ. ಹೀಗಾಗಿ ಇಂಜಿನ್ ಓವರ್ ಬಿಸಿಯಾಗಿ ಘಟನೆ ಸಂಭವಿಸಿರಬಹುದು ಎಂದು ಆರೋಪಿಸಿದ್ದಾರೆ. ಘಟನೆ ನಡೆದಾಗ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿ ಮಾಹಿತಿ ಪಡೆದಿದ್ದಾರೆ.
Follow us on Social media