ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಬಿಜೆಪಿ ಮುಖಂಡ ಸಾಜದ್ ಅಹ್ಮದ್ ಖಾಂಡೆಯನ್ನು ಹತ್ಯೆ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಸಾಜದ್ ಅವರು ಕುಲ್ಗಾಂ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷಕರಾಗಿದ್ದರು. ಇಂದು ಬೆಳಿಗ್ಗೆ ಸಾಜದ್ ಮನೆಯ ಬಳಿ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸಾಜದ್ ಅವರನ್ನು ಅನಂತ್ ನಾಗ್ ಜಿಲ್ಲೆಯ ಆಸ್ಪತ್ರೆಗೆ ಸಾಗಿಸುವಷ್ಟರದಲ್ಲಿ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.
ಕುಲ್ಗಾಂ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಬಿಜೆಪಿ ನಾಯಕರ ಮೇಲೆ ನಡೆದ 2ನೇ ದಾಳಿ ಇದಾಗಿದೆ. ಆ.4 ರಂದು ಕುಲ್ಗಾಂ ಜಿಲ್ಲೆಯ ಮತ್ತೊಬ್ಬ ಬಿಜೆಪಿ ಸರ್ಪಂಚ್ ಆಗಿದ್ದ ಅರಿಫ್ ಅಹ್ಮದ್ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಅದೃಷ್ಟವಶಾಕ್ ಅರಿಫ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು.
Follow us on Social media