ತಿರುವನಂತಪುರಂ : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿಮಾನ ಪ್ರಯಾಣದ ಸಂದರ್ಭ ಅವರ ವಿರುದ್ಧ ಘೋಷಣೆ ಕೂಗಿದ ಘಟನೆ ನಡೆದಿದೆ.
ಕಣ್ಣೂರಿನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದ ವಿಮಾನದೊಳಗೆ ಪ್ರತಿಭಟನೆಯ ಬಿಸಿ ಎದುರಿಸಿದ್ದಾರೆ. ಈ ಮೂಲಕ ವಿಮಾನ ಪ್ರಯಾಣ ವೇಳೆ ಮುಖ್ಯಮಂತ್ರಿಗಳೊಬ್ಬರು ಪ್ರತಿಭಟನೆ ಬಿಸಿ ಎದುರಿಸಿದ ದೇಶದ ಮೊದಲ ಪ್ರಕರಣ ಇದೇ ಎನ್ನಲಾಗಿದೆ.
ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಅಂಗಿ ಧರಿಸಿ ಅವರ ವಿರುದ್ಧ ವಿಮಾನದಲ್ಲಿ ಘೋಷಣೆಗಳನ್ನು ಕೂಗಿದ್ದಾರೆ.ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಶಬರಿನಾಥನ್ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋವನ್ನು ಬಿಡುಗಡೆ ಮಾಡಿದ್ದಾರೆ.
ಇದರಲ್ಲಿ ಕಾಂಗ್ರೆಸ್ ಯುವ ಸಂಘಟನೆಯ ಇಬ್ಬರು ಕಾರ್ಯಕರ್ತರು ಮುಖ್ಯಮಂತ್ರಿ ವಿಜಯನ್ ರಾಜೀನಾಮೆ ಕೋರಿ ಮುಖ್ಯಮಂತ್ರಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದು ಮತ್ತು ಮುಖ್ಯಮಂತ್ರಿ ಜೊತೆಗಿದ್ದ ವ್ಯಕ್ತಿ ಅವರನ್ನು ತಳ್ಳುವುದನ್ನ ಕಾಣಬಹುದು. ಪ್ರತಿಭಟನಾನಿರತ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ತಳ್ಳಿದವರು ಹಿರಿಯ ಸಿಪಿಐ(ಎಂ) ನಾಯಕ ಮತ್ತು ಎಲ್ಡಿಎಫ್ ಸಂಚಾಲಕ ಇ.ಪಿ. ಜಯರಾಜನ್ ಎಂದು ಶಬರಿನಾಥನ್ ಆರೋಪಿಸಿದ್ದಾರೆ.
Follow us on Social media