ಮಂಗಳೂರು: ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ವರದಿ ಮತ್ತೆ ಮುಂದುವರೆದಿದ್ದು, ಸೋಮವಾರದಂದು ಉಡುಪಿ ಜಿಲ್ಲೆಯಲ್ಲಿ 45 ಮಂದಿಯಲ್ಲಿ ಹಾಗೂ ದ.ಕ. ಜಿಲ್ಲೆಯಲ್ಲಿ ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ.
ದ.ಕ. ಜಿಲ್ಲೆಯಲ್ಲಿ ಇಬ್ಬರು ಮಹಾರಾಷ್ಟ್ರದಿಂದ ಬಂದವರಲ್ಲಿ ಸೋಂಕು ಪತ್ತೆಯಾಗಿದ್ದರೆ, ಮತ್ತೊಬ್ಬರು ದುಬೈನಿಂದ ಬಂದವರಾಗಿದ್ದಾರೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಇಂದು ಸೋಂಕು ಪತ್ತೆಯಾದ ಎಲ್ಲರೂ ಮಹಾರಾಷ್ಟ್ರದಿಂದ ಆಗಮಿಸಿದವರು ಎಂದು ತಿಳಿದುಬಂದಿದೆ. ಆ ಮೂಲಕ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 947ಕ್ಕೆ ಏರಿಕೆಯಾಗಿದೆ.
Follow us on Social media