ಮಂಗಳೂರು : ಪವಿತ್ರ ರಂಜಾನ್ ತಿಂಗಳ ಪ್ರಥಮ ಚಂದ್ರ ದರ್ಶನ ಕೇರಳದ ಕಾಪಾಡ್‌ನಲ್ಲಿ ಗುರುವಾರ ಆಗಿದ್ದು, ಶುಕ್ರವಾರದಿಂದ ಉಪವಾಸ ಆರಂಭಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ.
ನಾಳೆಯಿಂದ ಉಪವಾಸ ಆರಂಭಗೊಳ್ಳಲಿದೆ ಎಂದು ಉಡುಪಿ ಜಿಲ್ಲಾ ಖಾಝಿ ಅಲ್ ಹಾಜಿ ಇಬ್ರಾಹಿಂ ಮುಸ್ಲಿಯಾರ್ ತಿಳಿಸಿದ್ದಾರೆ.
ಕೇರಳ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಉಪವಾಸ ಆರಂಭಗೊಳ್ಳಲಿದೆ. ರಂಜಾನ್ ತಿಂಗಳಲ್ಲಿ ಒಂದು ತಿಂಗಳ ಕಾಲ ಮುಸ್ಲಿಮರು ಉಪವಾಸ ಆಚರಿಸುತ್ತಾರೆ. ಬೆಂಗಳೂರು ಸೇರಿದಂತೆ ದೇಶದ ಇತರ ಕಡೆಗಳಲ್ಲಿ ಶನಿವಾರದಿಂದ ಉಪವಾಸ ಆರಂಭಗೊಳ್ಳುವ ಸಾಧ್ಯತೆ ಇದೆ.