ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ಕೊರೊನಾಗೆ ಬಲಿಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.
ಮೃತಪಟ್ಟವರು 31 ವರ್ಷದ ಯುವಕ ಮತ್ತು 51 ವರ್ಷದ ಗಂಡಸು ಎಂದು ತಿಳಿದುಬಂದಿದೆ.
ಮಂಗಳೂರಿನ ಬೆಂಗ್ರೆ ನಿವಾಸಿ, ಡಯಾಬಿಟಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ 51 ವರ್ಷದ ಸೋಂಕು ಪೀಡಿದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತ 31 ವರ್ಷದ ಯುವಕನನ್ನು ಭಟ್ಕಳ ನಿವಾಸಿ ಎಂದು ಗುರುತಿಸಲಾಗಿದೆ.
Follow us on Social media