ನವದೆಹಲಿ : ದೇಶದಲ್ಲಿ ಲಾಕ್ ಡೌನ್ ಮುಂದುವರೆಸಲು ಕೆಂದ್ರ ಬಹುತೇಕ ತೀರ್ಮಾನ ಮಾಡಿದ್ದು ಇದಕ್ಕಾಗಿ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದೆಇದರ ಬಗ್ಗೆ 14 ರಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ದೇಶದಲ್ಲಿ ಹೇರಲಾಗಿರುವ 21 ದಿನಗಳ ಲಾಕ್ ಡೌನ್ ಮುಕ್ತಾಯಗೊಳ್ಳಲು ಇನ್ನು ಕೇವಲ ಎರಡು ದಿನಗಳು ಬಾಕಿ ಉಳಿದಿದೆ. ಈ ಹಿನ್ನೆಲೆ ಪ್ರಧಾನಿ ಮೋದಿಯವರು ನಿನ್ನೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಲಾಕ್ ಡೌನ್ ವಿಸ್ತರಣೆ ಸಂಬಂಧ ವಿಡಿಯೋ ಸಂವಾದ ಮೂಲಕ ಮಹತ್ವದ ಚರ್ಚೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ .
ಇದೇ ವೇಳೆ ಸಂವಾದಲ್ಲಿ ಪ್ರಧಾನಿ ಮೋದಿಯವರಿಗೆ ಬಹುತೇಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ ಡೌನ್ ವಿಸ್ತರಣೆ ಮಾಡುವುದೆ ಒಳಿತು ಎಂಬ ಸಲಹೆ ಮಾಡಿದ್ದಾರೆ.
ಏಪ್ರಿಲ್ 30 ರವರೆಗೆ ದೇಶಾದ್ಯಂತ ಲಾಕ್ ಡೌನ್ ವಿಸ್ತರಿಸುವ ಬಗ್ಗೆ ಖಚಿತವಾಗಿರುವ ಸಂದರ್ಭದಲ್ಲಿ ಸೋಂಕಿನ ತೀವ್ರತೆ ಆಧರಿಸಿ ಜಿಲ್ಲೆಗಳನ್ನು ಮೂರು ವಲಯಗಳಾಗಿ ವಿಂಗಡಿಸಿ ಮುನ್ನೆಚ್ಚರಿಕೆ ವಹಿಸಲು ಕೇಂದ್ರ ಸರಕಾರ ಯೋಜನೆ ರೂಪಿಸಿದೆ. ಆರ್ಥಿಕತೆ ಚೇತರಿಕೆಗೆ ಗಮನ ಹರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸೋಂಕಿನ ತೀವ್ರತೆ ಕಡಿಮೆಯಿರುವಂತಹ ಪ್ರದೇಶಗಳಲ್ಲಿ ಲಾಕ್ಡೌನ್ ನಿರ್ಬಂಧಗಳ ಸಡಿಲಿಕೆಯ ಇಂಗಿತ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳಾಗಿ ಜಿಲ್ಲೆಗಳನ್ನು ವಿಂಗಡಿಸಲು ಸರಕಾರ ಸಿದ್ಧತೆ ಆರಂಭಿಸಿದೆ.
ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳಾಗಿ ಜಿಲ್ಲೆಗಳನ್ನು ವಿಂಗಡಿಸಲು ಸರಕಾರ ಸಿದ್ಧತೆ ಆರಂಭಿಸಿದೆ.ಸೋಂಕಿನ ತೀವ್ರತೆ ಕಡಿಮೆಯಾಗಿರುವ ಪ್ರದೇಶಗಳಲ್ಲಿ ಹಂತ ಹಂತವಾಗಿ ನಿರ್ಬಂಧಗಳನ್ನು ಸಡಿಲಿಸಲಿದೆ.
ಹಸಿರು ವಲಯದಲ್ಲಿ ಅಗತ್ಯ ಮುನ್ನೆಚ್ಚರಿಕೆಯೊಂದಿಗೆ ನಿರ್ಬಂಧಗಳನ್ನು ಸಡಿಲಿಸಲಾಗುತ್ತದೆ. ಹಳದಿ ವಲಯದ ಜಿಲ್ಲೆಗಳಲ್ಲಿ ಸೀಮಿತ ಪ್ರಮಾಣದಲ್ಲಿ ಸಂಚಾರಕ್ಕೆ ಅನುಮತಿ, ಕೃಷಿ ಉತ್ಪನ್ನಗಳ ಮಾರಾಟ, ಚಟುವಟಿಕೆಗೆ ಅವಕಾಶ ನೀಡಿದರೆ, ಕೆಂಪು ವಲಯದ ಜಿಲ್ಲೆಗಳನ್ನು ಸಂಪೂರ್ಣವಾಗಿ ಸ್ತಬ್ಧಗೊಳಿಸಲಾಗುತ್ತದೆ.
ಇನ್ನೂ, ಹಸಿರು ವಲಯ ಎಂದರೆ, ಈವರೆಗೆ ಸೋಂಕು ಪತ್ತೆಯಾಗದ ಜಿಲ್ಲೆಗಳು. ಕಿತ್ತಳೆ ವಲಯ ಎಂದರೆ 15ಕ್ಕಿಂತ ಕಡಿಮೆ ಸೋಂಕಿತರಿರುವ ಹಾಗೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗದ ಜಿಲ್ಲೆಗಳು. ಕೆಂಪು ವಲಯ ಎಂದರೆ, 15 ಕ್ಕಿಂತ ಹೆಚ್ಚು ಸೋಂಕಿತರಿರುವ ಜಿಲ್ಲೆಗಳು ಹಾಗೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ, ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇರುವ ಜಿಲ್ಲೆಗಳು ಎಂದು ತಿಳಿದು ಬಂದಿದೆ.
ಇನ್ನೂ, ಲಾಕ್ ಡೌನ್ ಮುಂದುವರೆಸುವ ಬಗ್ಗೆ ಪ್ರಧಾನಿ ಮೋದಿಯವರು ಇದೆ 14 ರಂದು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಹಲವು ಕಡೆ ಕೂಡ ಕೊರೋನ ನ ಸೊಂಕಿತರ ಸಂಖ್ಯೆ ಇಳಿಕೆಯಾಗಿದ್ದರೂ ಲಾಕ್ಡೌನ್ ಮುಂದುವರೆಸುವ ಅನಿವಾರ್ಯತೆ ಎದುರಾಗಿದೆ.
Source : UNI
Follow us on Social media