Breaking News

ನಟ ಸುಶಾಂತ್ ಆತ್ಮಹತ್ಯೆ ಪ್ರಕರಣ: ಕರಣ್ ಜೋಹರ್, ಸಲ್ಮಾನ್ ವಿರುದ್ಧ ಪ್ರಕರಣ ದಾಖಲು

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಕೀಲರೊಬ್ಬರು ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಸಲ್ಮಾನ್ ಖಾನ್, ಎಕ್ತಾ ಕಪೂರ್ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

ಬಿಹಾರ ಮೂಲಕ ಸುಧೀರ್ ಕುಮಾರ್ ಓಜಾ ಎಂಬುವವರು ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಸಲ್ಮಾನ್ ಖಾನ್, ಎಕ್ತಾ ಕಪೂರ್ ಸೇರಿದಂತೆ 8 ಮಂದಿ ವಿರುದ್ಧ ಭಾರತೀಯ ದಂಡ ಸಂಹಿತೆ 306, 109, 504 & 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಓಝಾ ಅವರು, ಸುಶಾಂಕ್ ಅವರನ್ನು 7 ಸಿನಿಮಾಗಳಿಂದ ಕೈಬಿಡಲಾಗಿತ್ತು. ಅಲ್ಲದೆ, ಕೆಲ ಸಿನಿಮಾಗಳು ಕೂಡ ಬಿಡುಗಡೆಗೊಂಡಿರಲಿಲ್ಲ. ಇಂತಹ ಪರಿಸ್ಥಿತಿಗಳಿಂದಾಗಿ ನೊಂದು ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಹೀಗಾಗಿ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದೇನೆಂದು ತಿಳಿಸಿದ್ದಾರೆ. 

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×