Breaking News

ಪಶುವೈದ್ಯೆ ಅತ್ಯಾಚಾರ: ಎಲ್ಲಾ ಆರೋಪಿಗಳ ಎನ್ ಕೌಂಟರ್

ಹೈದರಾಬಾದ್​ : ಹೈದರಾಬಾದ್​ 26 ವರ್ಷದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯ ಮೇಲೆ ಅತ್ಯಾಚಾರ ಮಾಡಿ ಬೆಂಕಿ ಹಾಕಿ ಸುಟ್ಟ ನಾಲ್ವರು ಆರೋಪಿಗಳು ಪೊಲೀಸರು ಎನ್​ಕೌಂಟರ್​ ಮಾಡಿದ್ದು ಆರೋಪಿಗಳು ಸಾವನ್ನಪ್ಪಿದ್ದಾರೆ.

ಈ ಘಟನೆ ನ್ಯಾಷನಲ್‌ ಹೈವೇ 44ರಲ್ಲಿ ಶುಕ್ರವಾರ ಬೆಳಗ್ಗಿನ ಜಾವ 3.30 ಗಂಟೆಗೆ ನಡೆದಿದೆ.ಆರೋಪಿಗಳನ್ನು ಪೊಲೀಸರು ಅತ್ಯಾಚಾರ ಹಾಗೂ ಹತ್ಯೆ ನಡೆದ ಸ್ಥಳಕ್ಕೆ ಮಹಜರಿಗೆ ಕರೆದೋಯ್ದಿದ್ದ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದು
ಅರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.ಮೊಹಮ್ಮದ್​ ಆರಿಫ್(26), ಚಿಂತಕುಂಟ ಚೆನ್ನಕೇಶವಲು (20), ಜೊಲು ಶಿವ(20) ಹಾಗೂ ಜೊಲು ನವೀನ್​ (20) ಎನ್‌ಕೌಂಟರ್‌ನಲ್ಲಿ ಹತ್ಯೆಯಾದ ಆರೋಪಿಗಳು. 26 ವರ್ಷದ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್​ ಆರಿಫ್, ಮೂವರು ಕ್ಲೀನರ್‍ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳನ್ನು14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಅವರನ್ನು ಹೈದರಾಬಾದ್‌ ನ ಚೆರ್ಲಪಳ್ಳಿ ಜೈಲಿಗೆ ವರ್ಗಾಹಿಸಲಾಗಿತ್ತು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×