ಪುತ್ತೂರು: ಅನಾರೋಗ್ಯದ ಕಾರಣ ಹೈಸ್ಕೂಲ್ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ದಕ್ಷಿನ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಇಲ್ಲಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕೃತಿ ಕೆ.ಎ ಅಕಾಲಿಕ ಮರಣಕ್ಕೆ ತುತ್ತಾದ ವಿದ್ಯಾರ್ಥಿನಿಯಾಗಿದ್ದಾಳೆ.
ಬನ್ನೂರಿನ ಸೇಡಿಯಾಪು ಕಂಜೂರು ನಿವಾಸಿಗಳಾದ ಆನಂದ ಕುಲಾಲ್ ಮತ್ತು ಪದ್ಮಾವತಿ ದಂಪತಿ ಪುತ್ರಿ ಕೃತಿ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಶ್ರೀ ರಾಮಕೃಷ್ಣ ಪ್ರೌಢಶಾಲೆಗೆ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರಿ ಇಂದು ರಜೆ ಕೊಡಲಾಗಿತ್ತು.
Follow us on Social media