ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ಶ್ರೇಯಾ ಪಕ್ಕಳ ಮೃತ ದುರ್ದೈವಿ.
ಉಮಾಪತಿ ಹಾಗೂ ಪದ್ಮ ಪಕ್ಕಳ ದಂಪತಿಯ ಎರಡನೇ ಪುತ್ರಿ ಶ್ರೇಯಾಳನ್ನು ಇಂದು ಬೆಳಗ್ಗೆ ಅನಾರೋಗ್ಯ ಕಾರಣ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಹೃದಯಾಘಾತದಿಂದ ಶ್ರೇಯಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
Follow us on Social media