ಪುತ್ತೂರು : ಬಸ್ಸೊಂದರಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕನನ್ನು ಪ್ರಯಾಣಿಕರು ಹಾಗೂ ಸಿಬ್ಬಂದಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದು, ವಿಚಾರಣೆ ಸಂದರ್ಭ ಆತ ಠಾಣೆಯಿಂದ ಎಸ್ಕೇಪ್ ಆಗಿದ್ದಾನೆ.
ಮಂಗಳವಾರ ಸುಳ್ಯ ಕಡೆಯಿಂದ ಬರುತ್ತಿದ್ದ ಕೆಎಸ್ಆರ್ ಟಿಸಿ ಹಿಂದಿನ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಮಾರ್ಗಮಧ್ಯೆ ಯುವಕನೊಬ್ಬ ಕಿರುಕುಳ ನೀಡಲು ಯತ್ನಿಸಿದ್ದಾನೆ.ಇದನ್ನು ಆಕ್ಷೇಪಿಸಿದ ವಿದ್ಯಾರ್ಥಿನಿ ತಕ್ಷಣ ಸಹ ಪ್ರಯಾಣಿಕರು ಹಾಗೂ ಬಸ್ ನ ನಿರ್ವಾಹಕರಿಗೆ ಮಾಹಿತಿ ನೀಡಿದ್ದಾಳೆ.ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಠಾಣೆ ಬಳಿ ಬರುತ್ತಿದ್ದಂತೆ ಬಸ್ಸನ್ನು ನಿಲ್ಲಿಸಿದ ಚಾಲಕ ಅದರಲ್ಲಿದ್ದ ಇತರ ಪ್ರಯಾಣಿಕರು ಹಾಗೂ ನಿರ್ವಾಹಕನ ನೆರವಿನಿಂದ ಯುವಕನನ್ನು ಪೊಲೀಸರಿಗೆ ಒಪ್ಪಿಸಿ ದೂರು ನೀಡಿದ್ದಾರೆ. ಠಾಣೆಯಲ್ಲಿದ್ದ ಮಹಿಳಾ ಪೊಲೀಸರು ವಿಚಾರಣೆ ನಡೆಸುತ್ತಿದ್ದರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ತಕ್ಷಣವೇ ಸ್ಥಳೀಯರು ರಿಕ್ಷಾ ಹಾಗೂ ಬೈಕ್ ನಲ್ಲಿ ಬೆನ್ನಟ್ಟಿದ್ದಾರೆ. ಆದರೆ ವಿಷ್ಣುಮೂರ್ತಿ ದೇವಸ್ಥಾನದ ರಸ್ತೆಯಲ್ಲಿ ಓಟಕ್ಕಿತ್ತ ಯುವಕ ತಪ್ಪಿಸಿಕೊಂಡು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ. ವಿದ್ಯಾರ್ಥಿನಿ ಮೌಖಿಕ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ
Follow us on Social media