ನವದೆಹಲಿ: ಪೆಟ್ರೋಲ್, ಡಿಸೆಲ್ ದರ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 1.67, 7.10 ರೂಪಾಯಿ ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಲ್ಲಿನ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ಮಾರಾಟ ತೆರಿಗೆಯನ್ನು ಏರಿಕೆ ಮಾಡಲಾಗಿದೆ.
ಈ ಪರಿಣಾಮವಾಗಿ ದೆಹಲಿಯಲ್ಲಿ ಈಗ ಪೆಟ್ರೋಲ್ ದರ 69.59 ರೂಪಾಯಿಗಳಿಂದ 71.26 ರೂಪಾಯಿಗಳಿಗೆ ಏರಿಕೆಯಾಗಿದೆ. ಡಿಸೆಲ್ ದರ ಈಗ 62.29 ರಿಂದ 69.39 ರೂಪಾಯಿಗೆ ಏರಿಕೆಯಾಗಿದೆ. ದೆಹಲಿ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ ನ್ನು ಶೇ.27 ರಿಂದ ಶೇ.30ಗೆ ಏರಿಕೆ ಮಾಡಿದೆ. ಡೀಸೆಲ್ ಮೇಲಿನ ತೆರಿಗೆಯನ್ನು ಶೇ.16.75 ರಿಂದ ಶೇ.30 ರಷ್ಟು ಏರಿಕೆ ಮಾಡಲಾಗಿದೆ.
Follow us on Social media