ರಾಮನಗರ: ಬಿಜೆಪಿಯಲ್ಲಿ ಭಿನ್ನಮತ ಇಲ್ಲ. ಸರ್ಕಾರ ಉರುಳಿಸಿ ಅಧಿಕಾರಕ್ಕೆ ಬರುವ ಬಗ್ಗೆ ಪ್ರತಿಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಲಿ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.
ರಾಮನಗರ ಜಿಲ್ಲಾ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 2023ವರೆಗೆ ಮಾತ್ರ ಅಲ್ಲ, ಆ ನಂತರವೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದರು.
ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಮತೀಯ ಚಟುವಟಿಕೆ ನಡೆಯುತ್ತಿಲ್ಲ. ಪಕ್ಷದ ನಾಯಕರು, ಸದಸ್ಯರು ಎಲ್ಲರೂ ಒಟ್ಟಿಗೆ ಸೇರುವುದು ತಪ್ಪಲ್ಲ. ಎಲ್ಲರೂ ಶಿಸ್ತಿನ ಸಿಪಾಯಿಗಳು, ಯಾರೂ ಯಾವುದೇ ಭಿನ್ನಾಭಿಪ್ರಾಯದ ಹೇಳಿಕೆ ಕೊಟ್ಟಿಲ್ಲ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು.
Follow us on Social media