Breaking News

ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಈ ಉಪಕ್ರಮಕ್ಕೆ ಚಾಲನೆ ನೀಡಿದರು. ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ಪರಿಣಾಮಕಾರಿಯಾಗಿ ಇರುವುದು ಕಂಡು ಬಂದಿದೆ. ಇದೀಗ ರಾಜ್ಯದಲ್ಲಿ ಕೂಡ ಈ ಪ್ರಕ್ರಿಯೆ ಲಭ್ಯವಾದಂತಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು, ಕರ್ನಾಟಕ ರಾಜ್ಯಕ್ಕೆ ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ಪ್ಲಾಸ್ಮಾ ಚಿಕಿತ್ಸೆಯಿಂದ ಸೋಂಕಿತರು ಗುಣಮುಖರಾದರೆ ಅತ್ಯಂತ ಸಂತೋಷದ ಸಂಗತಿ ಎಂದು ಹೇಳಿದರು. ಇಂದಿನಿಂದ ಇದರ ಕ್ಲಿನಿಕಲ್ ಪ್ರಯೋಗ ಆರಂಭವಾಗಿದ್ದು, ವೆಂಟಿಲೇಟರ್ ನಲ್ಲಿರುವ ಪೀಡಿತರಿಗೆ ಈ ಚಿಕಿತ್ಸೆ ನೀಡಲಾಗುವುದು. ಕೋವಿಡ್‍ನಿಂದ ಗುಣಮುಖರಾಗಿರುವ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸಹಕರಿಸಲು ಮುಂದೆ ಬಂದಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×