ಕೋಲಾರ: ಭೂ ವಿವಾದಕ್ಕೆ ಸಂಬಂಧಿಸಿ ನಡೆದ ಘರ್ಷಣೆಯಲ್ಲಿ ಬಂಗಾರಪೇಟೆ ತಹಶೀಲ್ದಾರ್ ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬಂಗಾರಪೇಟೆಯ ತೊಪನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.
ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳಿಯವರಿಗೆ ಚಾಕುವಿನಿಂದ ಇರಿಯಲಾಗಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ ಎಂದು ಕಾಸಗಿ ವಾಹಿನಿಯೊಂದು ವರದಿ ಮಾಡಿದೆ.. ಜಮೀನಿನ ಸರ್ವೆ ಸಂಬಂಧ ಉಂಟಾದ ಜಗಳವೇ ಈ ಘಟನೆಗೆ ಕಾರಣವೆಂದು ಮಾಹಿತಿ ತಿಳಿದು ಬಂದಿದೆ,
ಕೋಲಾರ ಜಾಲಪ್ಪ ಆಸ್ಪತ್ರೆಯಲ್ಲಿ ತಹಶೀಲ್ದಾರ್ ಸಾವನ್ನಪ್ಪಿದ್ದಾರೆ. ದೊಡ್ಡಕಳವಂಚಿ ಗ್ರಾಮ ನಿವಾಸಿ ವೆಂಕಟಪತಿ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದ್ದು ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.
Follow us on Social media