ಬೆಂಗಳೂರು : ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಂಟ್ವಾಳ ಪೇಟೆಯ 33 ವರ್ಷದ ಮಹಿಳೆಯೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18ಕ್ಕೇರಿದ್ದು, ಸೋಂಕಿತ ಮಹಿಳೆಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊರೋನ ಸೋಂಕಿತರಾಗಿ ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಂಟ್ವಾಳ ಪೇಟೆಯ 67 ವರ್ಷ ಪ್ರಾಯದ ಮಹಿಳೆಯ ಪುತ್ರಿಯಾಗಿದ್ದಾರೆ. ತಾಯಿಯ ಸಂಪರ್ಕದಿಂದ ಸೋಂಕು ತಗಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.