ಮಂಗಳೂರು : ಮೂಡುಪೆರಾರ ಗ್ರಾಮದ ಸೂರಲ್ಪಾಡಿಯಲ್ಲಿರುವ ಸಲ್ವಾ ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದದ್ದನ್ನು ಬಜಪೆ ಪೊಲೀಸರು ಏ.4 ರಂದು ಪತ್ತೆ ಮಾಡಿದ್ದಾರೆ.
ಸುಮಾರು 23 ಕೆ.ಜಿ ದನದ ಮಾಂಸ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಾದ ಮಹಮ್ಮದ್ ಸಮೀರ್ ಮತ್ತು ಮಹಮ್ಮದ್ ಸಫಿಕ್ ವಿರುದ್ದ ಪ್ರಕರಣ ದಾಖಲಿಸಿಕೊಂಡು ಕೃತ್ಯಕ್ಕೆ ಬಳಸಲಾದ ಮಾರುತಿ ಆಮ್ನಿ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಬಜಪೆ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ನಾಯ್ಕ್ ಅವರು ಸಿಬ್ಬಂದಿಗಳೊಂದಿಗೆ ಚಿಕನ್ ಶ್ತಾಲ್ಗೆ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ದನವನ್ನು ಎಲ್ಲಿಂದಲೋ ಕಳವು ಮಾಡಿಕೊಂಡು ಬಂದು ಅದನ್ನು ಮಾಂಸ ಮಾಡಿ ಮಾರಾಟ ನಡೆಸುತ್ತಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದು ತನಿಖೆ ಮುಂದುವರಿಸಿದ್ದಾರೆ..
Follow us on Social media