ಬೆಂಗಳೂರು: ಕೊರೋನಾ ಎರಡನೇ ಅಲೆ ಸೃಷ್ಟಿಯಾದ ಮೇಲೆ ಸಾಕಷ್ಟು ಮಂದಿಗೆ ಪಾಸಿಟಿವ್ ಬಂದಿದೆ, ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು, ಶ್ರೀಮಂತರು ಕೂಡ ಸೋಂಕಿಗೆ ತುತ್ತಾಗುತ್ತಿದ್ದಾರೆ.
ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಆರೋಪ ಸಾಕಷ್ಟು ಕೇಳಿಬರುತ್ತಿದೆ. ಕೊರೋನಾ ಪಾಸಿಟಿವ್ ಗೆ ಒಳಗಾಗಿರುವ ನಟಿ ಅನು ಪ್ರಭಾಕರ್ ಕೂಡ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.
ಮೊನ್ನೆ ಏಪ್ರಿಲ್ 17ರಂದು ನಟಿ ಅನು ಪ್ರಭಾಕರ್ ಗೆ ಕೊರೋನಾ ಸೋಂಕು ಇರುವುದು ಗೊತ್ತಾಯಿತು. ಅದಾಗಿ ಐದು ದಿನ ಕಳೆದರೂ ಇನ್ನೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಡೆಯಿಂದ ಪ್ರತಿಕ್ರಿಯೆಯೇ ಬಂದಿಲ್ಲವಂತೆ. ಕೊರೋನಾ ದೃಢಪಟ್ಟು 5 ದಿನವಾಗಿದೆ, ಹೋಂ ಐಸೊಲೇಷನ್ ನಲ್ಲಿದ್ದೇನೆ. ಆದರೆ ಬಿಬಿಎಂಪಿ ಕಡೆಯಿಂದ ಯಾವ ಫೋನ್ ಬಂದಿಲ್ಲ, ಕೋವಿಡ್ ವಾರ್ ವೆಬ್ ಸೈಟ್ ನಲ್ಲಿ ತಮ್ಮ ಹೆಸರು ಅಪ್ಡೇಟ್ ಕೂಡ ಆಗಿಲ್ಲ, ಇನ್ನೂ ನನಗೆ ಬಿಯು ಸಂಖ್ಯೆ ಬಂದಿಲ್ಲ, ಈ ವಿಷಯವನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರ ಟ್ವಿಟ್ಟರ್ ಖಾತೆಯನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.
Follow us on Social media