ಬೆಂಗಳೂರು: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಬೆಂಗಳೂರಿನಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಜಾರಿಗೆ ತಂದಿರುವ ಒಂದು ವಾರಗಳ ಲಾಕ್ಡೌನ್ ಸಂದರ್ಭದಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
ಹೌದು.. ಒಂದು ವಾರ ಲಾಕ್ಡೌನ್ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ನಗರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧವನ್ನ ಹೇರಿ ಕಮಿಷನರ್ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

