ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಮಾರ್ಗಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಅನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್ ಹೌಸ್ ಬಳಿ ನಾಲ್ವರು ದುಷ್ಕರ್ಮಿಗಳು 25 ವರ್ಷದ ವಿ.ವೈ ವಿನುತ್ ಎಂಬಾತನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ನನ್ನು ಹತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದರು.
ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು ತಿಳಿದುಬಂದಿದ್ದು ಜಾಕಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.
Follow us on Social media