ಬೆಂಗಳೂರು: ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಬೆಂಗಳೂರಿನ ಹೊರವಲಯದಲ್ಲಿ ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಸಂಜೆ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಮೈಸೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾಗ ನೈಸ್ ರಸ್ತೆ ಬಳಿಯ ಕದಂಬ ಹೋಟೆಲ್ ಬಳಿ ಈ ಅಪಘಾತ ನಡೆದಿದ್ದು, ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಸಚಿವರನ್ನು ಮತ್ತು ಕಾರು ಚಾಲಕನನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Follow us on Social media