ಬೆಂಗಳೂರು : ಸರ್ಕಾರಿ ಶಾಲೆಗಳ ಅಭಿವೃದ್ದಿ ಕಡೆಗಣಿಸಿ ಶಾಲೆ ಬಿಡುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದಕ್ಕೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ರಾಜೀನಾಮೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ವರ್ಷದೊಳಗಿನ ಸುಮಾರು 10.12 ಲಕ್ಷ ಮಕ್ಕಳು ಶಾಲೆಗಳಿಂದ ಹೊರಗುಳಿದಿದ್ದಾರೆ ಎಂದು ಡಿಸಿಎಸ್ ಇಲಾಖೆಗಳು ಹೈಕೋರ್ಟ್‌ಗೆವರದಿ ಸಲ್ಲಿಸಿವೆ. 534 ಮಕ್ಕಳು ಭಿಕ್ಷಾಟನೆ, 186 ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಬಗ್ಗೆಯೂ ಮಾಹಿತಿಗಳು ಲಭ್ಯವಾಗಿವೆ. ಶಿಕ್ಷಣ ಇಲಾಖೆಯು ಮಕ್ಕಳನ್ನು ಶಾಲೆಗೆ ಸೆಳೆಯಲು ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಸೈಕಲ್, ಶೋ, ಸಾಕ್ಸ್‌ಗಳನ್ನು ಮಕ್ಕಳಿಗೆ ನೀಡಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಹಿಜಾಬ್, ಪಠ್ಯಪರಿಷ್ಕರಣೆ ವಿಷಯದಲ್ಲೇ ಅವರು ಗಮನ ಹರಿಸುತ್ತಿದ್ದಾರೆ.
ಸರ್ಕಾರಿ ಶಾಲೆಗಳ ಕಟ್ಟಡಗಳು ಕೂಡಾ ಕಳಪೆ ಸ್ಥಿತಿಯಲ್ಲಿದ್ದು, ಮಳೆಗಾಲದಲ್ಲಿ ತರಗತಿಯಲ್ಲಿ ಕುಳಿತುಕೊಳ್ಳುವುದೇ ಭಯ ಹುಟ್ಟಿಸುವಂತಾಗಿದೆ. ಮೂಲಭೂತ ಸೌಕರ್ಯಗಳನ್ನು ಕೂಡಾ ಒದಗಿಸಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ. ವಿದ್ಯಾಸಿರಿ, ಕ್ಷೀರಭಾಗ್ಯ, ಬಿಸಿಯೂಟ ಯೋಜನೆಗಳೂ ಇನ್ನೂ ಆರಂಭಗೊಂಡಿಲ್ಲ ಎಂದವರು ಟೀಕಿಸಿದರು.
Follow us on Social media