ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಮೂವರು ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ನಿನ್ನೆ ರಾತ್ರಿ ನೆಲಮಂಗಲದ ಜಯನಗರದಲ್ಲಿ ನೆಡೆದಿದೆ.
ಜಯನಗರ ನಿವಾಸಿ ಅರುಣ್ (23) ಕೊಲೆಯಾದವರು. ಸಲ್ಮಾನ್, ಇಮ್ರಾನ್ ಹಾಗೂ ಸಜ್ಯನ್ ಬಂಧಿತ ಆರೋಪಿಗಳು.
ಜಯನಗರದ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರದ ರಸ್ತೆಯಲ್ಲಿ ರಾತ್ರಿ 11ರವೇಳೆ ಎಬಿಬಿ ಕಾರ್ಖಾನೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಸಿಗರೇಟ್ ಸೇದುತ್ತಿದ್ದ ಮೂವರನ್ನು ಪ್ರಶ್ನಿಸಿ ಅರುಣ್ ಬುದ್ದಿವಾದ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಮೂವರು ಆತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ನೆಲಮಂಗಲ ನಗರ ಪೊಲೀಸರು ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಕೃತ್ಯ ವೆಸಗಿದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Follow us on Social media