ಬೆಳ್ತಂಗಡಿ : ಚಾರ್ಮಾಡಿಯ ಪಂಡಿಕಟ್ಟೆಯಲ್ಲಿ ಬೈಕ್ ಗಳೆರಡು ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರನೋರ್ವನ ಮೇಲೆ ಹಿಂದಿನಿಂದ ಬರುತ್ತಿದ್ದ ಟ್ರಕ್ ಹರಿದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ನಝೀರ್ (25) ಮೃತರು ಎಂದು ಗುರುತಿಸಲಾಗಿದೆ. ಅವರು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನೊಂದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ತಂದೆ ತಾಯಿ ಓರ್ವ ಸಹೋದರನನ್ನು ಅಗಲಿದ್ದಾರೆ.ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow us on Social media