ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,82,511 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,82,511 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.10ವರೆಗೂ 1,13,07,002 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ನಡುವೆ ನಿನ್ನೆ ಒಂದೇ ದಿನ ದೇಶದಲ್ಲಿ ಬರೋಬ್ಬರಿ 26,506 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 7,93,802ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಕೊರೋನಾವೈರಸ್ ಪ್ರಕರಣಗಳು 7 ಲಕ್ಷ ಹಾಗೂ ಸಾವಿನ ಸಂಖ್ಯೆ 20 ಸಾವಿರ ಗಡಿ ದಾಟಿರುವ ಹೊರತಾಗಿಯೂ ಪ್ರತಿ 10 ಲಕ್ಷ ಜನಸಂಖ್ಯೆಗೆ ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ವಿಶ್ವದಲ್ಲೇ ಕಡಿಮೆಯಿದೆ.
ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 505.37 ಮಂದಿ ಕೊರೋನಾಕ್ಕೆ ತುತ್ತಾಗಿದ್ದಾರೆ. ಆದರೆ, ಜಾಗತಿಕ ಸರಾಸರಿ 10 ಲಕ್ಷ ಜನಸಂಖ್ಯೆಗೆ 1,453.25ರಷ್ಟಿದೆ. ಇದೇ ವೇಳೆ ಚಿಲಿಯಲ್ಲಿ 10 ಲಕ್ಷಕ್ಕೆ 15,459,8 ಜನರಿಗೆ ಕೊರೋನಾ ಸೋಂಕು ತಗುಲಿದ್ದರೆ, ಪೆರುವಿನಲ್ಲಿ 9,070 ಜನರು ಸೋಂಕಿಗೆ ತುತ್ತಾಗಿದ್ದಾರೆ. ಅದೇ ರೀತಿ ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 14.27 ಸಾವು ಸಂಭವಿಸುತ್ತಿದೆ. ಆದರೆ, ಜಾಗತಿಕವಾಗಿ 68.29 ಮಂದಿ ಸಾವಿಗೀಡಾಗುತ್ತಿದ್ದಾರೆಂದು ತಿಳಿದುಬಂದಿದೆ.
Follow us on Social media