ನವದೆಹಲಿ: ಕೊರೋನಾ ವೈರಸ್ ನಿರ್ವಹಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾಲ್ಕು ದೇಶಗಳ ಲಾಕ್ ಡೌನ್ ಜೊತೆ ಭಾರತದ ಲಾಕ್ ಡೌನ್ ಅನ್ನು ಹೋಲಿಕೆ ಮಾಡಿರುವ ಗ್ರಾಫ್ ಅನ್ನು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಹೇಗೆ ಭಾರತದಲ್ಲಿ ಲಾಕ್ ಡೌನ್ ವಿಫಲವಾಗಿದೆ ಎಂದು ತಿಳಿಸಿದ್ದಾರೆ.
ಅತೀ ಹೆಚ್ಚು ಕೊರೋನಾಘಾತಕ್ಕೆ ಗುರಿಯಾಗಿರುವ ಸ್ಪೇನ್, ಜರ್ಮನಿ, ಇಟಲಿ ಹಾಗೂ ಬ್ರಿಟನ್ ನಲ್ಲಿ ಲಾಕ್ ಡೌನ್ ನಂತರ ಪ್ರಕರಣಗಳು ಇಳಿದಿವೆ. ಆದರೆ ಭಾರತದಲ್ಲಿ ಲಾಕ್ ಡೌನ್ ಸಮಯದಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ತಿಳಿಸಿದ್ದಾರೆ.
ಭಾರತದಲ್ಲಿ ಇಂದು ಒಂದೇ ದಿನ 9 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 2.36 ಲಕ್ಷ ದಾಟಿದೆ. ಇನ್ನು ದೇಶದಲ್ಲಿ ಇಂದು 278 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 6,641ಕ್ಕೆ ಏರಿಕೆಯಾಗಿದೆ.
Follow us on Social media