ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆಯಾಡಿದ್ದು 13 ಭಯೋತ್ಪಾದಕರನ್ನು ಹೊಡೆದುರುಳಿಸಿದೆ.
ಮೆಂಧರ್-ಪೂಂಚ್ ಪ್ರದೇಶದ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಭಾರತೀಯ ಯೋಧರು 13 ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ನಲ್ಲಿ ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಗಡಿ ನುಸುಳಲು ಪ್ರಯತ್ನಿಸುತ್ತಿದ್ದ ಮೂವರು ಭಯೋತ್ಪಾದಕರನ್ನು ಭಾರತೀಯ ಯೋಧರು ಹತ್ಯೆ ಮಾಡಿದ್ದರು.
ನಂತರ ಮೆಂಧರ್ ನಲ್ಲಿ 10 ಭಯೋತ್ಪಾದಕರನ್ನು ಸೇನೆ ಎನ್ ಕೌಂಟರ್ ಮಾಡಿ ಪರಾಕ್ರಮ ಮೆರೆದಿದ್ದು ಇದೇ ವೇಳೆ ಪೂಂಚ್ ಜಿಲ್ಲೆಯ ಗಡಿ ಭಾಗದ ಕೆಲ ಹಳ್ಳಿಗಳಲ್ಲಿ ಶೋಧ ಕಾರ್ಯ ಮುಂದುವರೆಸಿದೆ.
Follow us on Social media