ಮಂಗಳೂರು: ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಖಾಸಗಿ ಕಾರ್ಯಕ್ರಮದ ಕಾರಣದಿಂದಾಗಿ ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ ಖಾದರ್ ಸಹೋದರ ಯು.ಟಿ ಇಫ್ತಿಕಾರ್ ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.
ಇವರನ್ನು ನೊಡಿ ವಿಮಾಣ ನಿಲ್ದಾಣದಲ್ಲಿ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು.
ಇಂದು ಸಂಜೆ ಕಾಸರಗೋಡಿನಲ್ಲಿ ಧೋನಿ ಅವರ ಸ್ನೇಹಿತನಾದ ಡಾ. ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗಿಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
Follow us on Social media