ಮಂಗಳೂರು : ಬಿಜೆಪಿ ಮಾಜಿ ವಕ್ತಾರೆ ನೂರುಪ್ ಶರ್ಮಾ ಆಡಿದ್ದ ಮಾತುಗಳನ್ನು ಬೆಂಬಲಿಸಿ ಪೇಸ್ ಬುಕ್ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬವರನ್ನು ಹತ್ಯೆ ಮಾಡಿರುವುದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದ ಚಟುವಟಿಕೆ ಪ್ರಾರಂಭವಾಗಿದೆ ಎಂಬುದಕ್ಕೆ ಇದೊಂದು ಉದಾಹರಣೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
- ಈ ಕುರಿತು ಮಾತನಾಡಿದ ಅವರು, ಇದೊಂದು ಮಾನವೀಯತೆಗೆ ಸವಾಲಾಗಿರುವ ಪ್ರಕರಣವಾಗಿದ್ದು, ನಿರಂತರ ಗಲಭೆ ಸೃಷ್ಟಿಸಿ ಹತ್ಯೆ ಮಾಡಿ ಸಮಾಜವನ್ನು ಒಡೆಯಾಲಾಗುತ್ತಿದೆ ಎಂದು ಆರೋಪಿಸಿದ್ದಾರೆ.ಇನ್ನು ದೇಶದಲ್ಲಿ ಅತಂತ್ರ ಸ್ಥಿತಿ ತರಬೇಕು, ಜಿಹಾದಿ ಮಾನಸಿಕತೆ ಬೆಳೆಸಲು ಯತ್ನ ನಡೆಯುತ್ತಿದ್ದು, ಮೋದಿ ಸರ್ಕಾರ ಇದಕ್ಕೆ ಅವಕಾಶ ಕೊಡುವುದಿಲ್ಲ. ಈ ರೀತಿಯ ಘಟನೆಗಳನ್ನು ಅಲಲ್ಲ್ಲೇ ನಿಯಂತ್ರಿಸುವ ಕೆಲಸ ಆಗಬೇಕು ಎಂದು ಹೇಳಿದ್ದಾರೆ.