ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಏರಿಕೆಯೊಂದಿಗೆ ಕೊರೊನಾಗೆ ಬಲಿಯಾಗುತ್ತಿರವವ ಸಂಖ್ಯೆಯೂ ಹೆಚ್ಚಳವಾಗುತ್ತಿದ್ದು ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಳ್ಳಾಲ ಮೂಲದ 52 ವರ್ಷದ ಕೊರೊನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದಾರೆ.ಸೋಮವಾರ ಬೆಳಿಗ್ಗೆ ತೊಕ್ಕೊಟ್ಟು ಬಳಿ ಸಂತೋಷ್ ನಗರ ನಿವಾಸಿ 52 ವರ್ಷದ ಸೋಂಕಿತ ಗಂಡಸು ಕೊರೊನಾಗೆ ಬಲಿಯಾಗಿದ್ದು ಇಂದು ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ.
Follow us on Social media