Breaking News

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮತ್ತೆ 91 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮತ್ತೆ 91 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 2452ಕ್ಕೆ ಏರಿಕೆಯಾಗಿದೆ.

ಇನ್ನು ಮಂಗಳವಾರ 47 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಆ ಮೂಲಕ 985 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 1414 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 22677 ಮಂದಿಯ ವರದಿ ನೆಗೆಟಿವ್ ಆಗಿದೆ.

ಇನ್ನು ಪ್ರಾಥಮಿಕ ಸಂಪರ್ಕದಿಂದ 20 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 29 ಮಂದಿಯಲ್ಲಿ ಐಎಲ್‌‌ಐ ಪ್ರಕರಣ ಪತ್ತೆಯಾಗಿದೆ. 5 ಮಂದಿಯಲ್ಲಿ ಸಾರಿ ಪ್ರಕರಣ ದಾಖಲಾಗಿದೆ. ಅಂತರಾಷ್ಟ್ರೀಯ ಪ್ರಯಾಣದಿಂದ ಮರಳಿದ ನಾಲ್ವರಲ್ಲಿಓರ್ವರಲ್ಲಿ ಸೋಂಕು ಪತ್ತೆಯಾಗಿದ್ದು, 35 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×