ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ 194 ಮಂದಿಯಲ್ಲಿ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7075 ಕ್ಕೆ ಏರಿಕೆಯಾಗಿದೆ.
ಇಂದು ಮಂಗಳೂರಿನಲ್ಲಿ 129, ಬಂಟ್ವಾಳದಲ್ಲಿ 15, ಬೆಳ್ತಂಗಡಿಯಲ್ಲಿ 16, ಪುತ್ತೂರಿನಲ್ಲಿ 16, ಸುಳ್ಯದಲ್ಲಿ 5 ಮಂದಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 11 ಮಂದಿಗೆ ಪಾಸಿಟಿವ್ ಆಗಿದೆ.
ಇನ್ನು ಜಿಲ್ಲೆಯಲ್ಲಿ ಇಂದು 183 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 3487 ಕ್ಕೆ ಏರಿಕೆಯಾಗಿದೆ.
ಇನ್ನು ಜಿಲ್ಲೆಯಲ್ಲಿ ಇಂದು ಮಂಗಳೂರಿನಲ್ಲಿ ಆರು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ 214 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹಾಗೆಯೇ ಪ್ರಸ್ತುತ 3374 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ 98 ಐಎಲ್ಎ, 12 ಎಸ್ಎಆರ್ಐ ಪ್ರಕರಣಗಳಾಗಿದ್ದು 15 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ. ಇನ್ನು 69 ಮಂದಿಗೆ ಸೋಂಕು ತಗುಲಿರುವ ಸಂಪರ್ಕದ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.
Follow us on Social media