ಮಂಗಳೂರು : ಜಗತ್ತಿನಾದ್ಯಂತ ಹರಡುತ್ತಿರುವ ಕೋವಿಡ್-19 ನ ಹಾವಳಿ ಹೆಚ್ಚಾಗುತ್ತಿದ್ದು, ಎಲ್ಲ ಕ್ಷೇತ್ರಗಳು ಮಕಾಡೆ ಮಲಗಿವೆ. ಇದರಲ್ಲಿ ಪದವಿ ಪಡೆದು ಹೊರಬರುತ್ತಿರುವ ಯುವಕರ ಸಂಖ್ಯೆ ಹೆಚ್ಚಿದ್ದು, ಬೇಡಿಕೆಗೆ ತಕ್ಕಂತೆ ಕೆಲಸದ ಕೊರತೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಶೈಕ್ಷಣಿಕ ಸಾಲವನ್ನ ಮನ್ನಾ ಮಾಡುವ ಮೂಲಕ ಸರ್ಕಾರ ಯುವ ವಿದ್ಯಾರ್ಥಿಗಳ ಬೆನ್ನಿಗೆ ನಿಲ್ಲಬೇಕೆಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ ಆಗ್ರಹಿಸಿದೆ.
ನಮ್ಮ ರಾಜ್ಯಾದ್ಯಂತ ಅನೇಕ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಶಿಕ್ಷಣ ಸಾಲವನ್ನು ಪಡೆದಿರುತ್ತಾರೆ. ಈಗಿನ ಪರಿಸ್ಥಿತಿಯಲ್ಲಿ ಕೊನೆಯ ಸೆಮಿಸ್ಟರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಹಾಗು ಕಳೆದ ವರ್ಷ ವಿದ್ಯಾಭ್ಯಾಸವನ್ನು ಮುಗಿಸಿ ಪದವಿ, ಸ್ನಾತಕೋತ್ತರ ಪದವಿ, ಪಡೆದುಕೊಂಡು ಹೊರಬರುವ ವಿದ್ಯಾರ್ಥಿಗಳಿಗೆ ಉದ್ಯೋಗ ನಿಯೋಜನೆ ಆಗುವ ಪರಿಸ್ಥಿತಿ ತುಂಬ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿ ದೇಶಾದ್ಯಂತ ಎದುರಾಗಿದೆ.
ಕೊರೊನದಿಂದ ಎಷ್ಟೋ ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗುವುದು ತುಂಬಾ ಕಷ್ಟ ಇಂತ ಸಮಯದಲ್ಲಿ ಸರಕಾರ ವಿದ್ಯಾರ್ಥಿಗಳ ಒಂದು ವರ್ಷದ ಸಲ ಮನ್ನಾ ಮಾಡಬೇಕು ಎಂದು ದಕ್ಷಿಣ ಕನ್ನಡದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ ಉಪಾಧ್ಯಕ್ಷ ಅನ್ವೀತ್ ಕಟೀಲ್ ಆಗ್ರಹಿಸಿದ್ದಾರೆ.
ಆನ್ಲೈನ್ ಶಿಕ್ಷಣ ಬೇಡ : ಇಂಜಿನಿಯರಿಂಗ್ ಕಲಿಕೆಯ ವಿದ್ಯಾರ್ಥಿಗಳಿಗೆ ಆನ್ ಲೈನ್ನಲ್ಲಿ ಪಾಠ ಮಾಡುವ ಕೆಲ ಪ್ರಯತ್ನಗಳು ನಡೆಯುತ್ತಿವೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಇದಕ್ಕೆ ಬದಲಗಿ ಅನ್ಯ ಮಾರ್ಗಗಳನ್ನು ಹುಡುಕುವಂತೆ ವಿನಂತಿಸಿದ್ದಾರೆ.
Follow us on Social media