ಮಂಗಳೂರು : ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ 62 ಮಂದಿಯನ್ನು ಕ್ವಾರೆಂಟೈನ್ ಮಾಡಲಾಗಿದೆ.
ಮಲೇಷಿಯಾದಿಂದ ಮೇ.22ರಂದು ಬೆಂಗಳೂರಿಗೆ ಬಂದಿದ್ದ ವೈದ್ಯರು ಸರ್ಕಾರಿ ಕ್ವಾರೆಂಟೈನ್ ಮುಗಿಸಿ ಮಂಗಳೂರಿಗೆ ಬಂದಿದ್ದರು. ಭಾನುವಾರ ಅರಂತೋಡು ಗ್ರಾಮದ ಸಂಬಂಧಿಕರ ಮನೆಗೆ ಆಗಮಿಸಿ, ಬಳಿಕ ಯಜಮಾನನ ಕಾರಿನಲ್ಲಿ ತೆರಳಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಮಂಗಳೂರಿಗೆ ಬಂದ ಬಳಿಕ ಅವರಿಗೆ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಈ ವೈದ್ಯರ ಪ್ರಾಥಮಿಕ ಸಂಪರ್ಕಕ್ಕೆ ಬಂದ 62 ಮಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.
ದಕ್ಷಿಣ ಕನ್ನಡದಲ್ಲಿ ಒಟ್ಟು 129 ಮಂದಿಗೆ ಸೋಂಕು ಬಂದಿದ್ದು, 48 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 74 ಸಕ್ರಿಯ ಪ್ರಕರಣಗಳಿದ್ದು 6 ಮಂದಿ ಕೋವಿಡ್ 19ಗೆ ಮೃತಪಟ್ಟಿದ್ದಾರೆ.
Follow us on Social media