ಮಂಗಳೂರು : ಪಡೀಲು ಮತ್ತು ಮಂಗಳೂರು ಜಂಕ್ಷನ್ ನಡುವೆ ಭೂ ಕುಸಿತ ಉಂಟಾದ ಪರಿಣಾಮ ಕೆಲವು ರೈಲು ಸಂಚಾರವನ್ನು ಜೂನ್ 30ರ ಗುರುವಾರ ಬೆಳಗ್ಗೆ 9 ಗಂಟೆಯವರೆಗೆ ರದ್ದುಗೊಳಿಸಲಾಗಿದೆ.ಸುಬ್ರಹ್ಮಣ್ಯ ರೋಡ್-ಮಂಗಳೂರು ಸೆಂಟ್ರಲ್ ನಡುವಿನ ರೈಲು ಸಂಖ್ಯೆ 06488 ಕಾಯ್ದಿರಿಸದ ಎಕ್ಸ್ಪ್ರೆಸ್ ವಿಶೇಷ ರೈಲು ಹಾಗೂ ಮಂಗಳೂರು ಸೆಂಟ್ರಲ್ನಿಂದ ಸುಬ್ರಹ್ಮಣ್ಯ ರೋಡ್ ನಡುವೆ ಸಂಚರಿಸುವ ರೈಲು ಸಂಖ್ಯೆ 06489 ಕಾಯ್ದಿರಿಸದ ಎಕ್ಸ್ಪ್ರೆಸ್ ವಿಶೇಷ ರೈಲು ಸಂಚಾರ ಇಂದು ರದ್ದುಗೊಂಡಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
Follow us on Social media