ಮಂಗಳೂರು : ಅಕ್ಮೆ ಮೂವೀಸ್ ಇಂಟರ್ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ ದುಬೈಯ ಖ್ಯಾತ ಉದ್ಯಮಿ, ಮಾರ್ಚ್ – 22, ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸುತ್ತಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ “ಇಂಗ್ಲಿಷ್” ತುಳು ಸಿನಿಮಾ ಇದೇ ಬರುವ ಮಾರ್ಚ್ 20ರಂದು ತೆರೆಕಾಣಲಿದ್ದು, ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭವು ಮಾರ್ಚ್ 6 ಶುಕ್ರವಾರದಂದು ಸಂಜೆ 7 ಗಂಟೆಗೆ ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ (ಸಿಟಿ ಸೆಂಟರ್ ಮುಂಭಾಗ) ಹೊಟೇಲ್ ಸಾಯಿ ಪ್ಯಾಲೇಸ್ನಲ್ಲಿ ನಡೆಯಲಿದೆ.
“ಇಂಗ್ಲಿಷ್” ತುಳು ಚಿತ್ರದಲ್ಲಿ ಪ್ರಥಮ ಬಾರಿಗೆ ನಟಿಸುವ ಮೂಲಕ ಕೋಸ್ಟಲ್ ವುಡ್ಗೆ ಎಂಟ್ರಿ ಕೊಟ್ಟಿರುವ ಚಿತ್ರರಂಗದ ಮೇರು ನಟ ಅನಂತ್ ನಾಗ್ ಅವರು ಟ್ರೈಲರ್ ಬಿಡುಗಡೆಗೊಳಿಸಲಿದ್ದು ಸಮಾರಂಭದಲ್ಲಿ ಚಿತ್ರದ ನಿರ್ಮಾಪಕರು, ನಿರ್ದೇಶಕರು, ಚಿತ್ರದಲ್ಲಿ ನಟಿಸಿರುವ ಕಲಾವಿದರು, ರಂಗಭೂಮಿ ಹಾಗೂ ಚಿತ್ರರಂಗದ ನಿರ್ದೇಶಕರು, ನಿರ್ಮಾಪಕರು, ಖ್ಯಾತ ನಟ ನಟಿಯರು ಹಾಗೂ ಜನಪ್ರತಿನಿದಿಗಳು ಮತ್ತು ನಗರದ ಹಲವಾರು ಮಂದಿ ಗಣ್ಯರು ಭಾಗವಹಿಸಲಿದ್ದಾರೆ.ಈ ಸಿನಿಮಾವು ಮಾರ್ಚ್ ಮಾರ್ಚ್ 20ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ತೆರೆಕಾಣಲಿದ್ದು ಮಾರ್ಚ್ 27ರಂದು ಬೆಂಗಳೂರು ಹಾಗೂ ಎಪ್ರಿಲ್ 5ರಂದು ಪುಣೆ ಮತ್ತು ಮುಂಬೈಯಲ್ಲಿ ತೆರೆಕಾಣಲಿದೆ.ಸಿನಿಮಾಕ್ಕೆ ಕೃಷ್ಣ ಸಾರಥಿ ಛಾಯಾಗ್ರಹಣ ಮಾಡಿದ್ದು ಸಂಕಲನ ಮನು ಶೇರಿಗಾರ್, ಸಂಗೀತ ಮಣಿಕಾಂತ್ ಕದ್ರಿ, ಸಾಹಿತ್ಯ ಶಶಿರಾಜ್ ಕಾವೂರು, ಅರ್ಜುನ್ ಲೂಯಿಸ್, ಡಿಸೈನ್ ದೇವಿ ರೈ ಮಾಡಿದ್ದಾರೆ.ಸಿನಿಮಾಕ್ಕೆ ಕತೆ, ಚಿತ್ರಕತೆ, ಸಂಭಾಷಣೆ , ನಿರ್ದೇಶನ ಕೆ. ಸೂರಜ್ ಶೆಟ್ಟಿ ನೀಡಿದ್ದು ಪೃಥ್ವಿ ಅಂಬರ್, ನವ್ಯ ಪೂಜಾರಿ, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ನಾಯಕ್, ದೀಪಕ್ ರೈ ಪಾಣಾಜೆ, ರವಿರಾಮ ಕುಂಜ ಮೊದಲಾದವರು ಪಾತ್ರವಹಿಸಿದ್ದಾರೆ.
Follow us on Social media