ಮೂಡುಬಿದಿರೆ: ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮೂಡುಬಿದರೆ ವೃತ್ತ ನಿರೀಕ್ಷಕ ದಿನೇಶ್ ಕುಮಾರ್ ಮತ್ತು ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಅವರು ಜಂಟಿಯಾಗಿ ತಪಾಸಣೆ ನಡೆಸಿ ಸೋಮವಾರ ಒಂದೇ ದಿನ 100 ಕ್ಕೂ ಅಧಿಕ ಮಂದಿಗೆ ದಂಡ ವಿಧಿಸಿದ್ದಾರೆ.
ಜನಸಂದಣಿಯಾಗದಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮತ್ತು ಮಾಸ್ಕ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಲಾಗಿತ್ತು. ಆದರೆ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಾರಂಭಿಸಿದ್ದು ಇದು ಇನ್ನೂ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow us on Social media