ನವದೆಹಲಿ: ದೇಶಿಯ ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ತಿಂಗಳ ೨೫ರಿಂದ ಹಂತ ಹಂತವಾಗಿ ವಿಮಾನ ಸೇವೆಗಳು ಆರಂಭಗೊಳ್ಳಲಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ತಿಳಿಸಿದ್ದಾರೆ.
ಈ ಸಂಬಂಧ ವಿಮಾನಯಾನ ಸಂಸ್ಥೆಗಳು, ವಿಮಾನ ನಿಲ್ದಾಣಗಳಿಗೆ ಮಾಹಿತಿ ರವಾನಿಸಲಾಗಿದೆ.
ಕೊರೋನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ಮಾರ್ಚ್ 25 ರಿಂದ ಎಲ್ಲ ದೇಶಿಯ ಹಾಗೂ ಅಂತರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಲಾಕ್ ಡೌನ್ ಅವಧಿಯಲ್ಲಿ ಸರಕು ಸಾಗಾಣಿಕೆ, ಕೆಲ ವಿಶೇಷ ಸೇವೆಗಳ ವಿಮಾನಗಳ ಹಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ೨೦೨೦ ಮೇ ೨೫ ರಿಂದ ದೇಶಿಯ ವಿಮಾನಗಳ ಪ್ರಯಾಣ ಆರಂಭವಾಗಲಿದೆ.
ಹಂತ ಹಂತವಾಗಿ ವಿಮಾನಗಳ ಸೇವೆಗಳ ಲಭ್ಯವಾಗಲಿವೆ. ಎಲ್ಲ ವಿಮಾನ ನಿಲ್ದಾಣಗಳು, ವಿಮಾನ ಸಂಸ್ಥೆಗಳಿಗೆ ಈ ಸಂಬಂಧ ಮಾಹಿತಿ ರವಾನಿಸಲಾಗಿದೆ. ಸಿದ್ದವಾಗಿರುವುಂತೆ ಸೂಚಿಸಿದ್ದೇವೆ. ಪ್ರಯಾಣಿಕರ ಸಂಚಾರ, ಜಾಗೃತೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಚಿವಾಲಯ ಸದ್ಯದಲ್ಲೇ ಬಿಡುಗಡೆಮಾಡಲಿದೆ ಎಂದು ಹರದೀಪ್ ಸಿಂಗ್ ಟ್ವೀಟ್ ಮಾಡಿದ್ದಾರೆ.
Follow us on Social media