Breaking News

ಯೋಧನ ಬಂಧನ: ರಮೇಶ್ ಜಾರಕಿಹೊಳಿ ಖಂಡನೆ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಗರದಲ್ಲಿ ‌ತನ್ನ ಮನೆಯ ಮುಂದೆ ವಾಹನ ತೊಳೆಯುತ್ತಿದ್ದ ಅರೆ ಸೈನಿಕ ಪಡೆಯ ಯೋಧನನ್ನು ಕೇವಲ ಮಾಸ್ಕ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಬಂಧಿಸಿರುವುದು ಖಂಡನೀಯ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಒಬ್ಬ ಯೋಧ ಎನ್ನುವುದನ್ನೂ ಗಮನಿಸದೇ ಸಾರ್ವಜನಿಕವಾಗಿ ಹಿಂಸಿಸಿ, ಒಬ್ಬ ಖೈದಿಯಂತೆ ಕೈಗೆ ಕೋಳ ತೊಡಿಸಿ ಬಂಧಿಸಿರುವುದನ್ನು ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಲು ಸಾಧ್ಯವಿಲ್ಲ. ಒಬ್ಬ ನಿರಪರಾಧಿ ಯೋಧನನ್ನು ಅತ್ಯಂತ ಅಮಾನುಷವಾಗಿ ಹಿಂಸಿಸಿ, ಬಂಧಿಸಿರುವುದು ಸಮವಸ್ತ್ರ ಧರಿಸಿದ ಸೈನಿಕರಿಗೆ ಮಾಡಿದ ಅವಮಾನ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಕೂಡಲೇ ಬಂಧಿತ ಅರೆ ಸೈನಿಕ ಪಡೆಯ ಯೋಧನನ್ನು ಗೌರವದಿಂದ ಬಿಡುಗಡೆ ಮಾಡಬೇಕು ಮತ್ತು ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯ ಮೇಲೆ ತನಿಖೆ ನಡೆಸಿ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರನ್ನು ರಮೇಶ್ ಜಾರಕಿಹೊಳಿ‌ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×