ಬೆಂಗಳೂರು : ಜಲ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರ ಪ್ರಧಾನ ಆದ್ಯತೆ ನೀಡಿದ್ದು, ಅದರಂತೆ ರಾಜ್ಯದಲ್ಲಿ ಅಂತರ್ಜಲ ಜಲ ಚೇತನ ಎಂಬ ಹೊಸ ಯೋಜನೆಯನ್ನು ರಾಜ್ಯದ ೯ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಾಯೋಗಿಕವಾಗಿ ಈ ಜಿಲ್ಲೆಗಳಲ್ಲಿ ಯೋಜನೆಯ ಸಾಧಕ-ಬಾಧಕಗಳನ್ನು ನೋಡಿಕೊಂಡು ನಂತರ ಇದನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆ ಮಾಡಲಾಗುವುದು ಎಂದರು.
Follow us on Social media