ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ತಡೆಯುವಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದರು.
ನಸೌಧದಲ್ಲಿ ಸಿಎಂ ಯಡಿಯೂರಪ್ಪ ಪ್ರಧಾನಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿದ್ದಾರೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ಮಾಹಿತಿ ಪಡೆಯುತ್ತಿದ್ದಾರೆ. ಜೊತೆಗೆ ರಾಜ್ಯದಲ್ಲಿ ಈವರೆಗೆ ವರದಿಯಾಗಿರುವ ಕೊರೊನಾ ವೈರಸ್ ಸೋಂಕಿನ ಸ್ಥಿತಿಗತಿ, ವಿಮಾನ ನಿಲ್ದಾಣ, ಸಾರ್ವಜನಿಕ ಪ್ರದೇಶಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಿಎಂ ಮಾಹಿತಿ ನೀಡುತ್ತಿದ್ದಾರೆ.
ಕೊರೊನಾ ನಿಯಂತ್ರಿಸುವ ಹಿನ್ನೆಲೆ ಕೈಗೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆ ಪ್ರಧಾನಿ ಮೋದಿ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ.ಆದಷ್ಟು ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿ
ಯಂತ್ರಣ ಹೇರುವಂತೆ ಸೂಚನೆ ನೀಡಿದ್ದಾರೆ.
ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಡಾ.ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಇದಕ್ಕೂ ಮುನ್ನ ಸಿಎಂ ಬಿಎಸ್ ವೈ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದರು.ಸಭೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ,ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ ಹಾಗೂ ಎರಡು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಮಾನ್ಯ ಪ್ರದಾನ ಮಂತ್ರಿಗಳ ಜೊತೆ ನಡೆದ ವೀಡಿಯೋ ಸಂವಾದದ ಮುಖ್ಯಾಂಶಗಳು
ಯಡಿಯೂರಪ್ಪ ಸೇರಿದಂತೆ ಇತರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಮೋದಿ, ಕೊರೋನ ವೈರಸ್ ನಿಂದ ದೇಶವನ್ನು ರಕ್ಷಿಸುವ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಕೊರೋನ ವೈರಸ್ ತಡೆಗಟ್ಟಲು ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಮೋದಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಈ ಸಂದರ್ಭದಲ್ಲಿ ಯಡಿಯೂರಪ್ಪ, ಕಲಬುರಗಿ, ಹುಬ್ಬಳ್ಳಿ, ಬಳ್ಳಾರಿ ಮತ್ತು ಮಂಗಳೂರಿಗೆ ಹೊಸದಾಗಿ ಸೋಂಕು ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಲು ಅನುಮತಿ ನೀಡುವಂತೆ ಮನವಿ ಮಾಡಲಾಯಿತು.
ದೇಶದಲ್ಲಿ ದಿನೇ ದಿನೇ ಕರೋನ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು ನಾವು ಇನ್ನಷ್ಟು ಜಾಗೃತರಾಗಬೇಕು ಎಂದು ಮೋದಿ, ಕೊರೋನ ನಿಯಂತ್ರಣಕ್ಕೆ ಎಲ್ಲಾ ನೆರವು ನೀಡಲು ಸಿದ್ಧ. ದೇಶದ ಯಾವ ರಾಜ್ಯಗಳಲ್ಲಿಯೂ ಔಷಧಗಳ ಕೊರೆತೆ ಆಗದಂತೆ ಸರ್ಕಾರ ನಿಗಾವಹಿಸಲಿದೆ. ಹೆಚ್ಚಿನ ಔಷಧ ಅಗತ್ಯ ಬಿದ್ದರೆ ಅದನ್ಬು ಒದಗಿಸಲು ಕೇಂದ್ರ ಸರ್ಕಾರ ಸಿದ್ದವಿದೆ ಎಂಬ ಭರವಸೆ ನೀಡಿದ್ದಾರೆ.