Breaking News

ರಾಜ್ಯದಲ್ಲಿ 11 ಹೊಸ ಕೋವಿಡ್ ಪ್ರಕರಣ, ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆ, ಒಟ್ಟು 9 ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 11 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮೂರು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 258ಕ್ಕೇರಿಕೆಯಾಗಿದ್ದು, 9 ಮಂದಿ ಮೃತಪಟ್ಟಂತಾಗಿದೆ. 

ಕಲಬುರಗಿಯ 55 ವರ್ಷದ ವೃದ್ಧ, ಬೆಂಗಳೂರು ನಗರದ 65 ವರ್ಷದ ವೃದ್ಧ, ವಿಜಯಪುರದ 69 ವರ್ಷದ ವೃದ್ಧ ಸೋಂಕಿಗೆ ಬಲಿಯಾಗಿದ್ದಾರೆ. 

ಬಾಗಲಕೋಟೆಯ 43 ವರ್ಷದ ಪುರುಷ ಮತ್ತು 32 ವರ್ಷದ ಮಹಿಳೆ, ಚಿಕ್ಕಬಳ್ಳಾಪುರದ 65 ವರ್ಷದ ವೃದ್ಧ, ಬಾಗಲಕೋಟೆಯ 39 ವರ್ಷದ ಮಹಿಳೆ, ಬೆಂಗಳೂರು ನಗರದ 65 ವರ್ಷದ ವೃದ್ಧ, ಹಿಂದುಪುರದಿಂದ ದ್ವಿಚಕ್ರವಾಹನದಲ್ಲಿ ಪ್ರಯಾಣ ಮಾಡಿದ ಬೆಂಗಳೂರಿನ 26 ವರ್ಷದ ವ್ಯಕ್ತಿ, ಕಲಬುರಗಿಯ 10 ವರ್ಷದ ಬಾಲಕಿ, 51ವರ್ಷದ ವೃದ್ಧ, 35 ವರ್ಷದ ಮಹಿಳೆ, ವಿಜಯಪುರದ 69 ವರ್ಷದ ವೃದ್ಧ, ಬೆಳಗಾವಿಯ 33 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. 

ಇದರಿಂದ ಬೆಂಗಳೂರು ನಗರದಲ್ಲಿ 80, ಮೈಸೂರಿನಲ್ಲಿ 48, ಬೆಳಗಾವಿಯಲ್ಲಿ 18, ಕಲಬುರಗಿಯಲ್ಲಿ 16 ಪ್ರಕರಣಗಳು ಪತ್ತೆಯಾಗಿವೆ. 

Source : UNI

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×